ನೆಲ್ಯಾಡಿ: ಗ್ಯಾಸ್ ಟ್ಯಾಂಕರ್‌ವೊಂದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ ಪರಿಣಾಮ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಅ.29ರಂದು ರಾತ್ರಿ 9.30ರ ವೇಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ನೀರಕಟ್ಟೆಯಲ್ಲಿ ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ ಎಂದು ವರದಿಯಾಗಿದೆ.