ಅರಸಿನಮಕ್ಕಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವತಿಯಿಂದ ಪ್ರತಿಭಟನೆ

ಶೇರ್ ಮಾಡಿ

ಅರಸಿನಮಕ್ಕಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವತಿಯಿಂದ ಪ್ರತಿಭಟನೆ ಅರಸಿನಮಕ್ಕಿ ಗ್ರಾ,ಪಂ ವಠಾರದಲ್ಲಿ ನಡೆಯಿತು.

ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯರಾಜ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಲಾಯಿತು. ಸರಕಾರ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಪಶ್ಚಿಮ ಘಟ್ಟಕ್ಕೆ ಬರುವ ಅರಣ್ಯ ಸಂರಕ್ಷಣಾ ಕಾಯ್ದೆ ಕೃಷಿ ಭೂಮಿ ಜನವಸತಿ ಪ್ರದೇಶ ಮತ್ತು ಮೂಲಭೂತ ಸೌಕರ್ಯಕ್ಕೆ ಅನ್ವಯಿಬಾರದು ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಶಿರಾಡಿ ಆಗ್ರಹಿಸಿದರು

ಈ ಸಂಧರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಗಾಯತ್ರಿ, ಉಪಾಧ್ಯಕ್ಷರಾದ ಸುಧೀರ್ ಕುಮಾರ್.ಎಂ.ಎಸ್ ನಿಕಟಪೂರ್ವ ಅಧ್ಯಕ್ಷ ಹಾಗೂ ಮಲೆನಾಡು ಹಿತರಕ್ಷಣಾ ವೇದಿಕೆ ಸಮಿತಿ ಸದಸ್ಯ ನವೀನ್ ರೆಖ್ಯ, ಶಿಶಿಲ ಪಂಚಾಯಿತಿ ನಿಕಟಪೂರ್ವಧ್ಯಕ್ಷರಾದ ಸಂದೀಪ್ ಅಮ್ಮುಡಂಗೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ, ಧರ್ಮರಾಜ ಅಡ್ಕಾರಿ, ಸುಂದರ ಗೌಡ ಗಣೇಶ್.ಕೆ.ಹೊಸ್ತೋಟ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಬೇಬಿ ಕಿರಣ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

error: Content is protected !!