ಉಜಿರೆ: ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನವೀನಕುಮಾರ್ ಜೈನ್ ಹಾಗೂ ವಿದ್ಯಾರ್ಥಿಗಳಾದ ಖುಷಿ ಗೌಡ , ಸೋನಾಕ್ಷಿ, ಸೀಮಾ ಹಾಗೂ ಕಾವ್ಯಾ ಅವರಿಂದ ರಸಾಯನ ಶಾಸ್ತ್ರದಲ್ಲಿ ಇಂದ್ರಜಾಲ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.
ಅವಿನಾಶ್ ಕಾಜೂರು ಅವರು ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜಿಯಾ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು. ಧನುಶ್ರೀ ಸ್ವಾಗತಿಸಿದರು, ಶ್ರೇಯಾ ನಿರೂಪಿಸಿದರು, ಪಲ್ಲವಿ ವಂದಿಸಿದರು.