ಇನ್ಮುಂದೆ ಪುರುಷ ಟೈಲರ್​ಗಳು ಹೆಣ್ಣುಮಕ್ಕಳ ದೇಹದ ಅಳತೆ ತೆಗೆದುಕೊಳ್ಳುವಂತಿಲ್ಲ

ಶೇರ್ ಮಾಡಿ

ಇನ್ನುಮುಂದೆ ಪುರುಷ ಟೈಲರ್​ಗಳು, ಹೆಣ್ಣುಮಕ್ಕಳ ದೇಹದ ಅಳತೆ ತೆಗೆದುಕೊಳ್ಳುವಂತಿಲ್ಲ ಎಂದು ಮಹಿಳಾ ಆಯೋಗವು ಹೇಳಿದೆ. ಮಹಿಳೆಯರ ಸುರಕ್ಷತೆ ನಿಟ್ಟಿನಲ್ಲಿ ಉತ್ತರ ಪ್ರದೇಶ ಮಹಿಳಾ ಆಯೋಗವು ಈ ಕ್ರಮಗಳನ್ನು ಪ್ರಸ್ತಾಪಿಸಿದೆ. ಮಹಿಳೆಯರ ಅಳತೆಯನ್ನು ತೆಗೆದುಕೊಳ್ಳುವುದು, ಯೋಗ ಹಾಗೂ ಜಿಮ್​ಗಳಲ್ಲಿ ಹೆಣ್ಣುಮಕ್ಕಳಿಗೆ ಪುರುಷರು ತರಬೇತಿ ನೀಡುವುದನ್ನು ನಿರ್ಬಂಧಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಸಾರ್ವಜನಿಕ ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಹೆಚ್ಚಿಸಲು ಶಾಲಾ ಬಸ್​ಗಳಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನಿರಿಸುವುದು, ಮಹಿಳಾ ಬಟ್ಟೆ ಅಂಗಡಿಗಳಲ್ಲಿ ಮಹಿಳಾ ಸಿಬ್ಬಂದಿಯನ್ನೇ ನೇಮಿಸಿಕೊಳ್ಳಲು ಆಯೋಗವು ಸೂಚಿಸಿದೆ.

ಅಕ್ಟೋಬರ್ 28 ರಂದು ಲಕ್ನೋದಲ್ಲಿ ನಡೆದ ಸಭೆಯಲ್ಲಿ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು, ಅಲ್ಲಿ ಆಯೋಗದ ಸದಸ್ಯರು ಮಹಿಳೆಯರ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ವಿವಿಧ ಸಲಹೆಗಳನ್ನು ನೀಡಿದರು.

ಈ ಪ್ರಸ್ತಾವನೆಗಳ ಕಾರ್ಯಸಾಧ್ಯತೆಯನ್ನು ಇನ್ನೂ ನಿರ್ಧರಿಸಲಾಗಿಲ್ಲ, ಅನುಮೋದಿಸಿದ ನಂತರ, ಈ ಪ್ರಸ್ತಾವನೆಗಳ ಕರಡು ನೀತಿಯನ್ನು ರಚಿಸಲು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಆಯೋಗದ ಸದಸ್ಯರಾದ ಮನೀಶಾ ಅಹ್ಲಾವತ್ ಹೇಳಿದ್ದಾರೆ.

Leave a Reply

error: Content is protected !!