ನೆಲ್ಯಾಡಿ: ಮಂಡ್ಯದಲ್ಲಿ ಡಿ.20ರಿಂದ ಮೂರು ದಿನಗಳವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ 87 ದಿನಗಳ ಕಾಲ ಸಂಚರಿಸುತ್ತಿರುವ ರಥ ಶನಿವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಗೆ ಆಗಮಿಸಿತ್ತು.
ಕನ್ನಡ ಭಾಷೆ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಈ ಕುರಿತು ಎಲ್ಲರೂ ಪಾಲ್ಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಕನ್ನಡ ಜ್ಯೋತಿರಥ ನಾಡಿನಾದ್ಯಂತ ಸಂಚರಿಸುತ್ತಿದೆ. ಆಗಮಿಸಿದ ರಥವನ್ನು ಹೂಮಾಲೆ ಸಮರ್ಪಿಸಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ.ಎಂ.ಪಿ ಶ್ರೀನಾಥ್, ಕಡಬ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶೇಷಪ್ಪ.ರೈ, ಕಡಬ ಕಂದಾಯ ನಿರೀಕ್ಷಕ ಪೃಥ್ವಿರಾಜ್, ಬೆಳ್ತಂಗಡಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ನಿವೃತ್ತ ಮುಖ್ಯಶಿಕ್ಷಕ ವೆಂಕಟರಮಣ.ಆರ್, ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.