ನೆಲ್ಯಾಡಿ:ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇದರ ನೂತನವಾಗಿ ಜೋಡಣೆಗೊಂಡಿರುವ ಸಿ.ವಿ.ರಾಮನ್ ವಿಜ್ಞಾನ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮ ಡಿ.21ರಂದು ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್, ಅತಿಥಿಗಳಾಗಿ ಮಂಗಳೂರು ವಲಯ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ್ ಕೊಟ್ಟಾರಿ, ಬೆಂಗಳೂರು ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಮ್ಯಾನೇಜರ್ ಜಿ.ರಾಘವೇಂದ್ರ ಭಟ್ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀಧರ ಗೋರೆ, ಅಧ್ಯಕ್ಷರಾದ ಡಾ. ಮುರಳಿಧರ, ಕಾರ್ಯದರ್ಶಿ ಮೂಲಚಂದ್ರ ಕಾಂಚನ ತಿಳಿಸಿದರು.