ನೆಲ್ಯಾಡಿ: ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.5 ರಿಂದ 10ರ ತನಕ ನವೀಕರಣ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು.
ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಾಧವ ಸರಳಾಯ, ಖ್ಯಾತ ಜ್ಯೋತಿಷಿ ಶ್ರೀಧರ ಗೋರೆ ನೆಲ್ಯಾಡಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಶಿವಾನಂದ ಕಾರಂತ ಕಾಂಚನ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅಜಿತ್‌ಕುಮಾರ್ ಪಾಲೇರಿ, ಪ್ರಧಾನ ಸಂಚಾಲಕ ಸತೀಶ್ ಕೆ.ಎಸ್.ದುರ್ಗಾಶ್ರೀ ನೆಲ್ಯಾಡಿ, ಉಪಾಧ್ಯಕ್ಷರಾದ ಸುಂದರ ಶೆಟ್ಟಿ ಪುರ, ಸದಾನಂದ ಗೌಡ ಡೆಬ್ಬೇಲಿ, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅಜಯ್‌ರಾಜ್ ಸರಳಾಯ, ಉಪಾಧ್ಯಕ್ಷ ನೋಣಯ್ಯ ಗೌಡ ಡೆಬ್ಬೇಲಿ, ರವಿಕುಮಾರ್ ಹೊಳ್ಳ ಉಪಸ್ಥಿತರಿದ್ದರು.