ಶಿವಮೊಗ್ಗದಲ್ಲಿ ಆರು ಮಕ್ಕಳಲ್ಲಿ ಹೆಚ್ಎಂಪಿ ವೈರಸ್ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಮೊದಲೇ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದ್ದವು. ಆದ್ರೆ, ಇದೀಗ ಶಿವಮೊಗ್ಗದಲ್ಲಿ ವೈರಸ್ ಕಾಣಿಸಿಕೊಂಡಿರುವುದು ತಿಳಿದುಬಂದಿದೆ. ನವಂಬರ್ ತಿಂಗಳಿನಲ್ಲಿ 1 ವರ್ಷ ಹಾಗೂ 2 ವರ್ಷ ವಯಸ್ಸಿನ ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿದೆ. ಆದ್ರೆ, ಇದೀಗ ಮಕ್ಕಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.
ಕೊರೋನಾ ಶಂಕೆಯಲ್ಲಿ ಸ್ವಾಬ್ ತೆಗೆದು ಟೆಸ್ಟ್ ಮಾಡಿಸಲಾಗಿತ್ತು. ನಂತರ ಲ್ಯಾಬ್ ವರದಿಯಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ ಎನ್ನುವುದು ದೃಢಪಟ್ಟಿತ್ತು. ಉಸಿರಾಟದ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿ ಮಕ್ಕಳನ್ನು ಗುಣಪಡಿಸಲಾಗಿದೆ ಎಂದು ಡಾ. ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರ. ಅಕ್ಟೋಬರ್ ನವೆಂಬರ್ ತಿಂಗಳಿನಿಂದಲೇ ಈ ಸೋಂಕು ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ.
HMPV ವೈರಸ್ ಕುರಿತು ಕೇಂದ್ರ ಹಾಗೂ ಕರ್ನಾಟಕ ಆರೋಗ್ಯ ಇಲಾಖೆಗಳು ಮಾರ್ಗಸೂಚಿ ಪ್ರಕಟಿಸಿದೆ. ಜನಸಂದಣಿ ಪ್ರದೇಶಗಳಿಂದ ದೂರವಿರಿ ಎಂದು ಸೂಚಿಸಿದೆ. ಶುಚಿತ್ವಕ್ಕೆ ಹೆಚ್ಚಿನ ಆದ್ಯತ ನೀಡಲು ಸೂಚಿಸಿದೆ.ಕೈಗಗಳನ್ನು ಸೋಪಿನಿಂದ ಅಥವಾ ಸ್ಯಾನಿಟೈಸರ್‌ನಿಂದ ತೊಳೆಯಲು ಸೂಚಿಸಿದೆ. ಕೆಮ್ಮುವಾಗಿ ಮೂಗು, ಬಾಯಿ ಮುಚ್ಚಿಕೊಳ್ಳಲು ಸೂಚಿಸಲಾಗಿದೆ. HMPV ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಲು ಸೂಚಿಸಿದೆ.