ನೆಲ್ಯಾಡಿ ಪಿಎಂಶ್ರೀ ಶಾಲೆಗೆ ಶ್ರೀಕ್ಷೇತ್ರ ಧ.ಗ್ರಾ.ಯೋಜನೆಯಿಂದ ಬೆಂಚ್ ಡಸ್ಕ್ ವಿತರಣೆ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ)ಕಡಬ ತಾಲೂಕು ನೆಲ್ಯಾಡಿ ವಲಯದ ನೆಲ್ಯಾಡಿ ಪಿಎಂಶ್ರೀ ಶಾಲೆಗೆ ಶ್ರೀಕ್ಷೇತ್ರ ಧ.ಗ್ರಾ.ಯೋಜನೆಯಿಂದ ಬೆಂಚ್ ಡಸ್ಕ್ ವಿತರಣಾ ಕಾರ್ಯಕ್ರಮ ಜ.08 ರಂದು ನಡೆಯಿತು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಜಯಾನಂದ ಬಂಟ್ರಿಯಲ್ ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನಕರ.ಎಚ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ತುಕಾರಾಮ.ರೈ, ಶಾಲಾ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಇಸ್ಮಾಯಿಲ್, ಶಾಲಾ ಮುಖ್ಯಶಿಕ್ಷಕಿ ವೀಣಾ ಮಸ್ಕರೇನಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಆನಂದ.ಡಿ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹೇಮಾವತಿ.ಜೆ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

  •  

Leave a Reply

error: Content is protected !!