ಬೆಳ್ತಂಗಡಿ: ನೃತ್ಯ ಗುರು ಕಮಲಾಕ್ಷ ಆಚಾರ್ ( 77) ಜ. 14ರಂದು ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ನಿಧನ ಹೊಂದಿದರು.
ಅವರಿಗೆ ಇಬ್ಬರು ಪುತ್ರಿಯರಿದ್ದಾರೆ.
2022ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು ತಾಲೂಕಿನ ಪ್ರಥಮ ಭರತನಾಟ್ಯ ಗುರುವಾಗಿದ್ದರು. ಬೆಳ್ತಂಗಡಿಯಲ್ಲಿ ನೃತ್ಯ ನಿಕೇತನ ಸಂಸ್ಥೆಯನ್ನು ಹುಟ್ಟು ಹಾಕಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ನೀಡಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.1986 ರಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನೃತ್ಯ ಪರೀಕ್ಷಕರಾಗಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. 2021- 22ನೇ ಸಾಲಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದರು.