
ನೆಲ್ಯಾಡಿ : ಕರ್ನಾಟಕ ಸರಕಾರ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಇವರ ವತಿಯಿಂದ ಫೆ.8 ಮತ್ತು 9 ರಂದು ಬೆಂಗಳೂರಿನ ಚುಂಚನಘಟ್ಟದಲ್ಲಿ ನಡೆದ ರಾಜ್ಯಮಟ್ಟದ ಬಾಲಕ-ಬಾಲಕಿಯರ ರೋಪ್ ಸ್ಕಿಪಿಂಗ್- ಜಂಪ್ ರೋಪ್ ಸ್ಪರ್ಧೆಯಲ್ಲಿ ಕಾಂಚನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಚರಣ್.ಎಸ್ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದ್ವಿತ್ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಧನ್ಯಶ್ರೀ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯಶಿಕ್ಷಕ ಹಾಗೂ ಅಧ್ಯಾಪಕರು ಅಭಿನಂದಿಸಿದರು.







