ನೆಲ್ಯಾಡಿ: ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಎಂಬ್ರಾಯಿಡರಿ ತರಬೇತಿ

ಶೇರ್ ಮಾಡಿ

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ವಲಯದ ನೆಲ್ಯಾಡಿ ಕಾರ್ಯಕ್ಷೇತ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಧರ್ಮಸ್ಥಳ, ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಇದರ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯಡಿಯಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ 5 ದಿನಗಳ ಎಂಬ್ರಾಯಿಡರಿ ತರಬೇತಿಯನ್ನು ಫೆ.11ರಂದು ನೆಲ್ಯಾಡಿಯ ಸಿರಿ ಘಟಕದಲ್ಲಿ ಆಯೋಜಿಸಲಾಯಿತು.

ತರಬೇತಿ ಕೇಂದ್ರದ ಪ್ರಾಚಾರ್ಯರಾದ ಸೋಮನಾಥ್ ಅವರು ಉದ್ಘಾಟಿಸಿ ಕಾರ್ಯಕ್ರಮದ ಉದ್ದೇಶ ಹಾಗು ಪ್ರಯೋಜನ ಕುರಿತು ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಅವರು ಅಧ್ಯಕ್ಷತೆ ವಹಿಸಿದರು. ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಗೌಡ.ಎನ್ ಕಾರ್ಯಕ್ರಮದ ಮಾಹಿತಿ ಮಾರ್ಗದರ್ಶನ ನೀಡಿದರು. ಸಿ.ಆರ್.ಇ ಸಂಸ್ಥೆಯ ಸಿಬ್ಬಂದಿ ಸುಧೀರ್, ಎಂಬ್ರಾಯಿಡರಿ ತರಬೇತಿ ಶಿಕ್ಷಕಿ ಸೌಮ್ಯ ಅವರು ಉಪಸ್ಥಿತರಿದ್ದರು.

ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ.ಡಿ.ಬಿ ಸ್ವಾಗತಿಸಿದರು. ತಾಲೂಕಿನ ಜ್ಞಾನವಿಕಾಸ ಸಮನ್ವಯಧಿಕಾರಿ ಚೇತನ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಂಯೋಜಕಿ ಪೂರ್ಣಿಮಾ ವಂದಿಸಿದರು. ಸೇವಾ ಪ್ರತಿನಿಧಿಗಳಾದ ನಮಿತಾ ಶೆಟ್ಟಿ, ಹೇಮಾವತಿ.ಜೆ ಸಹಕರಿಸಿದರು. ತರಬೇತಿಯಲ್ಲಿ 23 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

  •  

Leave a Reply

error: Content is protected !!