

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳ ಪದಾಧಿಕಾರಿಗಳ ಮತ್ತು ಸೇವಾಪ್ರತಿನಿಧಿಗಳ ಸಭೆಯು ಫೆ.19ರಂದು ಕೌಕ್ರಾಡಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನೆಲ್ಯಾಡಿ ವಲಯದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅವರು ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಸುರಕ್ಷಾ ವಿಭಾಗದ ಯೋಜನಾಧಿಕಾರಿಗಳಾದ ನಾರಾಯಣ ಅವರು 2025 -26ನೇ ಸಾಲಿನ ಸಂಪೂರ್ಣ ಸುರಕ್ಷಾ ಸೌಲಭ್ಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಕಡಬ ತಾಲೂಕಿನ ಯೋಜನಾಧಿಕಾರಿಗಳಾದ ಮೇದಪ್ಪ ಗೌಡ.ಎನ್ ಅವರು ಈ ಸಭೆಯಲ್ಲಿ ಉಪಸ್ಥಿತರಿದ್ದು ಯೋಜನೆಯ ಕಾರ್ಯಕ್ರಮಗಳ ಬಗ್ಗೆ 2025- 26ನೇ ಸಾಲಿನ ವಾರ್ಷಿಕ ಹಿಡುವಳಿ ಯೋಜನೆ ಹಾಗೆಯೇ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದ ಮಾಹಿತಿ ಮಾರ್ಗದರ್ಶನ ನೀಡಿದರು. ವಲಯ ಮೇಲ್ವಿಚಾರಕರಾದ ಆನಂದ.ಡಿ.ಬಿ ಅವರು ಪ್ರಾಸ್ತಾವಿಕ ಮಾತನಾಡಿದರು.
ಸೇವಾಪ್ರತಿನಿಧಿ ಸುಮಿತ್ರಾ ಕಾರ್ಯಕ್ರಮ ನಿರೂಪಿಸಿದರು. ಹೇಮಾವತಿ.ಜೆ ಸ್ವಾಗತಿಸಿದರು. ಮೋಹಿನಿ ವಂದಿಸಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೆಯೇ ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.





