

ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ, ಶೈಕ್ಷಣಿಕ ಬಲ ವರ್ಧನೆ ವರ್ಷ 2024- 25ನೇ, ನೆಲ್ಯಾಡಿ ಕ್ಲಸ್ಟರ್ ಮಟ್ಟದ ಎಫ್ ಎಲ್ ಎನ್ ಕಲಿಕಾ ಹಬ್ಬ 2024- 25 ಇದರ ಉದ್ಘಾಟನಾ ಸಮಾರಂಭವು ಫೆ.19ರಂದು ನೆಲ್ಯಾಡಿಯ ಪಿಎಂಶ್ರೀ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆಲ್ಯಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಸಲಾಂ ಬಿಲಾಲ್ ದೀಪ ಬೆಳಗಿಸಿ ಉದ್ಘಾಟಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ಕಲಿಕಾ ಹಬ್ಬದಿಂದಾಗಿ ಶಾಲೆಗೂ ಹಾಗೂ ವಿದ್ಯಾರ್ಥಿಗಳಿಗೆ ಇನ್ನಷ್ಟು ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ದಿನಕರ.ಕೆ.ಎಚ್ ವಹಿಸಿ ಕಾರ್ಯಕ್ರಮ ಸಹಕಾರಗೊಳ್ಳಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ನೆಲ್ಯಾಡಿ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿಯಾದ ಪ್ರಕಾಶ್ ಅವರು ಮಾತನಾಡಿ ಕಲಿಕಾ ಹಬ್ಬವು ಸರಕಾರದ ನೂತನ ಕಾರ್ಯಕ್ರಮವಾಗಿದ್ದು ಮಕ್ಕಳಲ್ಲಿ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ. 110 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ವಿದ್ಯಾರ್ಥಿಗಳನ್ನು 7 ವಲಯಗಳಲ್ಲಿ ವಿಂಗಡಿಸಿ ವಿವಿಧ ರೀತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ನೀಡಲಾಗುತ್ತದೆ, ಇದರ ಜೊತೆ ಸಾಂಕೇತಿಕವಾಗಿ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ನೀಡಲಾಗುವುದು ಎಂದರು.
ನೆಲ್ಯಾಡಿ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷ ರೇಷ್ಮಾ ಶಶಿ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಇಸ್ಮಾಯಿಲ್ ನೆಲ್ಯಾಡಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ವೇದಿಕೆಯಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿನ ಸದಸ್ಯರಾದ ಉಷಾ ಜೋಯಿ, ಅಬ್ದುಲ್ ಜಬ್ಬಾರ್, ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷೆ ನಸೀಮಾ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಹೂವಿನ ಗಿಡಗಳನ್ನು ನೀಡಲಾಯಿತು.ಶಾಲಾ ಮುಖ್ಯಶಿಕ್ಷಕಿ ವೀಣಾ ಮಸ್ಕರೇನಸ್ ಸ್ವಾಗತಿಸಿದರು. ಶಿಕ್ಷಕ ವಿಮಲ್ ಕುಮಾರ್ ನಿರೂಪಿಸಿದರು. ಶಿಕ್ಷಕಿ ರತಿಲತಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ನೀಡಲಾಯಿತು





