

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಬಿಷಪ್ ಪೋಳಿಕಾರ್ಪೋಸ್ ಕಿಂಡರ್ ಗಾರ್ಡನ್ ನಲ್ಲಿ ಪ್ರುಟ್ಸ್ ಡೇ,(ಹಣ್ಣುಗಳ ದಿನ)ವನ್ನು ಆಚರಿಸಲಾಯಿತು.

ಆರೋಗ್ಯ ವೃದ್ಧಿಸುವಲ್ಲಿ ಹಣ್ಣುಗಳ ಮಹತ್ವ ಹಾಗೂ ಬಗೆ ಬಗೆಯ ಹಣ್ಣುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಈ ವಿನೂತನ ಕಾರ್ಯಕ್ರಮವನ್ನು ಸಂಸ್ಥೆ ಪ್ರತೀ ವರ್ಷ ಹಮ್ಮಿಕೊಳ್ಳುತ್ತಾ ಬಂದಿದೆ. ಪುಟಾಣಿಗಳು ಬಗೆ ಬಗೆಯ ಹಣ್ಣುಗಳನ್ನು ತಂದು ಪ್ರದರ್ಶನ ಮಾಡಿದರು. ಶಿಕ್ಷಕರು ಹಣ್ಣುಗಳ ಹೆಸರು ಹಾಗೂ ಅದರ ಮಹತ್ವವನ್ನು ತಿಳಿಸಿದರು.
ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಿಂಡರ್ ಗಾರ್ಡನ್ ನ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.






