

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ತ್ರೈಮಾಸಿಕ ಕೆಡಿಪಿ (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ) ಸಮಿತಿಗೆ ಹಿಂದುಳಿದ ವರ್ಗದ ಪ್ರತಿನಿಧಿಯಾಗಿ ಗಿರೀಶ್ ಇಚಿಲಂಪಾಡಿ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ) ಮಲ್ಲಿನಾಥ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ನೇಮಕಾತಿಯಿಂದ ತಾಲೂಕಿನಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವನ್ನು ತೀಕ್ಷ್ಣವಾಗಿ ಪರಿಶೀಲಿಸಲು ಅವಕಾಶ ಸಿಗಲಿದೆ. ಸಮಿತಿಯು ವಿವಿಧ ಸರ್ಕಾರಿ ಕಾರ್ಯಕ್ರಮಗಳ ಕಾರ್ಯೋನ್ನತಿ ಮತ್ತು ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ.






