

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಬಾಲಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸರು ಮಧ್ಯವಯಸ್ಕನನ್ನು ಬಂಧಿಸಿದ್ದು, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರಾಂತ್ಯ ಗ್ರಾಮದ ಅಜಂಕಲ್ಲುವಿನ ನಿವಾಸಿ ಪ್ರಕಾಶ್ (57) ಎಂಬಾತ ಈ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಕಳೆದ ಒಂದು ವರ್ಷದಿಂದ ಬಾಲಕಿಯ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವಷ೯ದಿಂದ ಬರುತ್ತಿದ್ದು ಈ ಸಂದಭ೯ ಸಂತ್ರಸ್ತೆ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆ ಎಂಬ ಆರೋಪವಿದೆ.

ಸಂತ್ರಸ್ತೆಯ ಪೋಷಕರು ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ ಬೆನ್ನಲ್ಲೇ, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳು—ಅಖಿಲ್ ಅಹಮದ್, ನಾಗರಾಜ್ ಲಂಬಾಣಿ, ಮೊಹಮ್ಮದ್ ಹುಸೇನ್, ಮೊಹಮ್ಮದ್ ಇಕ್ಬಾಲ್—ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.





