ಬ್ಯಾಂಕ್ ಆಫ್ ಇಂಡಿಯಾ: 159 ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ, ಮಾರ್ಚ್ 23ರವರೆಗೆ ಅರ್ಜಿ ಸಲ್ಲಿಕೆ

ಶೇರ್ ಮಾಡಿ

ಬ್ಯಾಂಕ್ ಆಫ್ ಇಂಡಿಯಾ ವಿವಿಧ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 159 ಹುದ್ದೆಗಳಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 8ರಿಂದ ಆರಂಭವಾಗಿದ್ದು, ಮಾರ್ಚ್ 23ರವರೆಗೆ ಮುಂದುವರೆಯಲಿದೆ. ಅರ್ಹ ಅಭ್ಯರ್ಥಿಗಳು bankofindia.co.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿಯ ಶುಲ್ಕ:
SC/ST/ದಿವ್ಯಾಂಗ ಅಭ್ಯರ್ಥಿಗಳಿಗೆ: ₹175
ಸಾಮಾನ್ಯ/ಇತರ ವರ್ಗದ ಅಭ್ಯರ್ಥಿಗಳಿಗೆ: ₹850
(ಪಾವತಿ UPI, ಡೆಬಿಟ್/ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಮಾತ್ರ)

ವಯೋಮಿತಿ:
ಮುಖ್ಯ ವ್ಯವಸ್ಥಾಪಕ: 28 – 45 ವರ್ಷ
ಹಿರಿಯ ವ್ಯವಸ್ಥಾಪಕ: 28 – 40 ವರ್ಷ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು/ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಒಟ್ಟು 150 ಪ್ರಶ್ನೆಗಳಿಗಾಗಿ 120 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಸಾಮಾನ್ಯ/EWS ಅಭ್ಯರ್ಥಿಗಳಿಗೆ ಕನಿಷ್ಠ ಶೇ. 35 ಅಂಕಗಳ ಅರ್ಹತಾ ಮಿತಿ ನಿಗದಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್ ಭೇಟಿ ನೀಡಿ.

  •  

Leave a Reply

error: Content is protected !!