ನೆಲ್ಯಾಡಿಯ ಸರೋಳಿಕೆರೆ ನಿವಾಸಿ ಜೋಮೋನ್.ಕೆ ಕುರಿಯಾಕೋಸ್ ಅಕಾಲಿಕ ನಿಧನ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಸಮೀಪದ ಸರೋಳಿಕೆರೆ ನಿವಾಸಿ ಜೋಮೋನ್.ಕೆ ಕುರಿಯಾಕೋಸ್ (46) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದು, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.

ಕೆಲವು ದಿನಗಳ ಹಿಂದಿನಿಂದಲೇ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ನಿರಂತರವಾಗಿದ್ದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದೆ ಭಾನುವಾರ ತಡರಾತ್ರಿ ಅವರು ಕೊನೆಯುಸಿರೆಳೆದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು, ತಂದೆ, ತಾಯಿ, ಮೂವರು ಸಹೋದರಿಯರು ಹಾಗೂ ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

  •  

Leave a Reply

error: Content is protected !!