

ಕೊಕ್ಕಡ: ಪಟ್ರಮೆ ಗ್ರಾಮದ ಮಿತ್ತಡ್ಕದಲ್ಲಿ ಆಕಸ್ಮಿಕ ಬೆಂಕಿ ಅವಘಡದಲ್ಲಿ ಸಂಜೀವ ಗೌಡರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಸಂಜೆ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಬೆಂಕಿ ತೀವ್ರಗತಿಯಲ್ಲಿ ಹಬ್ಬಿಕೊಂಡು ಮನೆ ಸಂಪೂರ್ಣ ಸುಟ್ಟುಹೋಗಿದೆ. ಸ್ಥಳೀಯರು ಕೂಡಲೇ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು, ಬೆಂಕಿ ಅವಘಡದಿಂದಾಗಿ ಮನೆಯ ಪಕ್ಕಾಸು, ಹಂಚು ಸೇರಿದಂತೆ ಎಲ್ಲಾ ಗೃಹೋಪಯೋಗಿ ಸಾಮಾಗ್ರಿಗಳು ಸಂಪೂರ್ಣವಾಗಿ ಕರಕಲಾಗಿದ್ದು, ಸುಮಾರು ರೂ.2 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ಪಂಚಾಯತಿ ಅಧ್ಯಕ್ಷ ಮನೋಜ್, ಪಿಡಿಒ ಅಮ್ಮಿ ಪೂಜಾರಿ, ಗ್ರಾಮ ಸಹಾಯಕ ಮೋಹನ್ ಆಗಮಿಸಿ ಪರಿಶೀಲನೆ ನಡೆಸಿದರು. ಬೆಂಕಿ ಹೇಗೆ ಹತ್ತಿಕೊಂಡಿದೆ ಎಂಬುದರ ಕುರಿತು ಇನ್ನೂ ಸ್ಪಷ್ಟತೆ ಇಲ್ಲ.





