

ಕಡಬ: ಸರಸ್ವತೀ ಸಮೂಹ ವಿದ್ಯಾ ಸಂಸ್ಥೆಗಳು ಕಡಬ ಇದರ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದಲ್ಲಿ 15 ವರ್ಷಗಳಿಂದ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ವಸಂತ ಕೆ. ಅವರು ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿರುತ್ತಾರೆ. ಇವರಿಗೆ ವಿಶ್ವ ಹಿಂದೂ ಪರಿಷತ್‌ನ ಗೌರವಾಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕರಾದ ವಾಸುದೇವ ಕಡ್ಯ ಇವರು ದೀಪ ಪ್ರಧಾನ ಮಾಡುವ ಮೂಲಕ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ರಾವ್ ಮಂಕುಡೆ, ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಆಡಳಿತ ಮಂಡಳಿ ಅಧ್ಯಕ್ಷರಾದ ಸದಾಶಿವ ಭಟ್, ಸಂಚಾಲಕರಾದ ಅಜಿತ್ ರೈ ಆರ್ತಿಲ, ಸರಸ್ವತೀ ವಿದ್ಯಾಲಯ ಕನ್ನಡ ಮಾಧ್ಯಮ ವಿಭಾಗದ ಆಡಳಿತ ಮಂಡಳಿ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಕಡಬ, ಸಂಚಾಲಕರಾದ ಸವಿತಾ ಶಿವಸುಬ್ರಹ್ಮಣ್ಯ ಭಟ್ ಹಾಗೂ ಎರಡೂ ವಿಭಾಗದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.









