ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿಗೆ ಶೇ.100 ಫಲಿತಾಂಶ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ.

ಸಂಸ್ಥೆಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿದ್ದು ಎರಡು ವಿಭಾಗಗಳಲ್ಲಿ ಒಟ್ಟು 68 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ತೇರ್ಗಡೆಯಾಗಿ ಶೇ.100 ಫಲಿತಾಂಶ ಲಭಿಸಿದೆ. ಈ ಪೈಕಿ ವಿಜ್ಞಾನ ವಿಭಾಗದಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳ ಪ್ರಥಮ ಶ್ರೇಣಿಯಲ್ಲಿ 2 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಹಾಗೂ ವಾಣಿಜ್ಯ ವಿಭಾಗದಲ್ಲಿ ಏಳು ವಿದ್ಯಾರ್ಥಿ ವಿಶಿಷ್ಟ ಶ್ರೇಣಿಯಲ್ಲಿ, 26 ವಿದ್ಯಾರ್ಥಿ ಪ್ರಥಮ ಶ್ರೇಣಿ ಮತ್ತು 3 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಂಸ್ಥೆಯ ಸಿಬ್ಬಂದಿಗಳನ್ನು ಸಂಸ್ಥೆಯ ಸಂಚಾಲಕರಾದ ರೆ.ಫಾ.ಜೈಸನ್ ಸೈಮನ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಡಾ.ವರ್ಗೀಸ್ ಕೈಪನಡ್ಕ ಅವರು ಅಭಿನಂದಿಸಿದ್ದಾರೆ.

cricket
  •  

Leave a Reply

error: Content is protected !!