ಬೈಕಿಗೆ ಟಿಪ್ಪರ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಶೇರ್ ಮಾಡಿ

ಬೈಕ್ ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಮೂಲದ ಉಪೇಂದ್ರ(29) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಪ್ರಯುಕ್ತ ಪುತ್ತೂರು ತಾಲೂಕಿನ ಕಾಣಿಯೂರು ನಿವಾಸಿ ಸಹೋದ್ಯೋಗಿ ಮೋಹನ್ (29) ಅವರನ್ನು ಉಪ್ಪಿನಂಗಡಿಗೆ ಬಿಟ್ಟು ಬರಲು ಬೈಕಿನಲ್ಲಿ ಹೊರಟಿದ್ದಾಗ ಈ ದುರಂತ ಸಂಭವಿಸಿದೆ.

ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಉಪೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದು, ಮೋಹನ್ ಸಣ್ಣ ಪುಟ್ಟ ಗಾಯಗಳೊಂದಿಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಸಬ್ ಇನ್ ಸ್ಪೆಕ್ಟರ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

  •  

Leave a Reply

error: Content is protected !!