

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಡುಬೆಟ್ಟು ಅಂಗನವಾಡಿ ಕೇಂದ್ರ ಹಾಗೂ ಕಲ್ಲಚೆಡವು ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸೋಲಾರ್ ಆಧಾರಿತ ಬೀದಿ ದೀಪಗಳನ್ನು ದುಷ್ಕರ್ಮಿಗಳು ಕದ್ದೊಯ್ದಿರುವ ಘಟನೆ ನಡೆದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್ ಜಿ ಅವರು ನೀಡಿದ ದೂರಿನಂತೆ, 2023-24ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಅಳವಡಿಸಲಾಗಿದ್ದ ಈ ಸೋಲಾರ್ ಬೀದಿ ದೀಪಗಳ ಮೌಲ್ಯ ಸುಮಾರು ರೂ. 25,000 ಎಂದು ಅಂದಾಜಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










