

ಧರ್ಮಸ್ಥಳ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ನಡೆದ ಉಗ್ರ ದಾಳಿಯನ್ನು ಖಂಡಿಸುತ್ತಾ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಸುವ ಈ ರೀತಿಯ ದಾಳಿಗಳು ಖಂಡನೀಯವಾಗಿದ್ದು, ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.


“ಈ ದೌರ್ಜನ್ಯಕ್ಕೆ ನಾವು ಅತೀವ ದುಃಖಿತರಾಗಿದ್ದೇವೆ. ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಅವರು ತಿಳಿಸಿದ್ದಾರೆ. ಅನಿರೀಕ್ಷಿತವಾಗಿ ತಮ್ಮ ಪ್ರಾಣ ಕಳೆದುಕೊಂಡವರಿಗೆ ಚಿರಶಾಂತಿಯನ್ನು ಕೋರಿ, ಅವರ ಕುಟುಂಬದವರಿಗೆ ಈ ದುಃಖದ ಹೊರೆ ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.











