

ನೆಲ್ಯಾಡಿ: ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ಏ.27ರಂದು ಸಂಜೆ ಕಾರು ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಮಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು, ಬೆಂಗಳೂರು ಕಡೆಯಿಂದ ಬರುವ ಮಿನಿ ಲಾರಿಗೆ ಬರ್ಚಿನಹಳ್ಳದಲ್ಲಿ ಡಿಕ್ಕಿಯಾಗಿದೆ. ಕಾರಿನಲ್ಲಿ ಮೃತಪಟ್ಟ ಅಬ್ದುಲ್ ಅವರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ ಶಾಂತನು ಮತ್ತು ಮೊಮ್ಮಗ ಅನ್ಸು ಇದ್ದರು. ಅಪಘಾತದಲ್ಲಿ ಎಲ್ಲರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ಪಡೆದ ನೆಲ್ಯಾಡಿ ಹೊರಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.












