

ಉಜಿರೆ: ಉಜಿರೆ ಕಾಲೇಜು ರಸ್ತೆಯಲ್ಲಿ ಭಾರೀ ಗಾಳಿ ಮಳೆಯ ಪರಿಣಾಮ ಮರೊಂದು ಬೈಕ್ ಮೇಲೆ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್, ಬೈಕ್ ಸವಾರ ಅಪಾಯದಿಂದ ಪಾರಾಗಿದ್ದು ಪ್ರಾಣಾಪಾಯ ತಪ್ಪಿದಂತಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.














