ನೆಲ್ಯಾಡಿಯಲ್ಲಿ ಯುವಕನ ಬರ್ಬರ ಹತ್ಯೆ – ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದ ದಾರುಣ ಘಟನೆ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಶರತ್(35) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಮೃತ ಶರತ್‌ನ ಚಿಕ್ಕಪ್ಪನ ಮನೆಯ ಅಂಗಳದಲ್ಲೇ ನಡೆದಿದೆ ಎಂದು ತಿಳಿದುಬಂದಿದೆ. ಮೃತನ ಬಳಿ ಚಾಕು ಬಿದ್ದಿರುವುದು ಪತ್ತೆಯಾಗಿದೆ

ಘಟನೆಯ ಮಾಹಿತಿ ತಿಳಿದ ಕೂಡಲೇ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷೆಯಲ್ಲಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

  •  

Leave a Reply

error: Content is protected !!