

ನೆಲ್ಯಾಡಿ: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ 10ಲಕ್ಷ ರೂ.ಅನುದಾನದಲ್ಲಿ ನಡೆದ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಪುಚ್ಚೇರಿ-ಜಾರಂಗೇಲ್ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮೇ 14ರಂದು ಉದ್ಘಾಟಿಸಿದರು.
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಅನಿಲ, ನೆಲ್ಯಾಡಿ ಗ್ರಾ.ಪಂ.ಸದಸ್ಯ ಆನಂದ ಗೌಡ ಪಿಲವೂರು, ಗೋಳಿತ್ತೊಟ್ಟು ಗ್ರಾ.ಪಂ.ಉಪಾಧ್ಯಕ್ಷ ಬಾಬು ಪೂಜಾರಿ ಕಿನ್ಯಡ್ಕ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.













