ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ?” ಎಂದಿದ್ದ ಮಾಜಿ ಕಾರ್ಪೊರೇಟರ್ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್

ಶೇರ್ ಮಾಡಿ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬುರ್ಖಾಧಾರಿ ಮಹಿಳೆಯರ ಕುರಿತಾಗಿ ಪೋಸ್ಟ್ ಹಾಕಿದ್ದ ಮಾಜಿ ಕಾರ್ಪೊರೇಟರ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಘಟನೆಯ ದಿನ ಹಂತಕರೊಂದಿಗೆ ಇದ್ದವರಾಗಿ ಅನುಮಾನಾಸ್ಪದವಾಗಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಬಂಧಿಸದಿರುವ ಬಗ್ಗೆ ಶ್ವೇತಾ ಪೂಜಾರಿ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಈ ಪೋಸ್ಟ್‌ನ ಆಧಾರವಾಗಿ ಕಾಂಗ್ರೆಸ್ ಸದಸ್ಯೆಯೊಬ್ಬರು ದೂರು ಸಲ್ಲಿಸಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಈ ಕ್ರಮ ಹಿಂದೂ ಕಾರ್ಯಕರ್ತರಲ್ಲಿ ಆಕ್ರೋಶ ಹುಟ್ಟಿಸಿದ್ದು, “ಹಿಂದುತ್ವ ಪರ ಧ್ವನಿ ಎತ್ತಿದವರನ್ನು ದಮನಿಸಲು ಕಾಂಗ್ರೆಸ್ ಮುಂದಾಗಿದೆ” ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ ಎಂಬ ವಾದವೂ ಒತ್ತಿ ಹೇಳಲಾಗುತ್ತಿದೆ.

  •  

Leave a Reply

error: Content is protected !!