

ನೆಲ್ಯಾಡಿ: ನೆಲ್ಯಾಡಿ -ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಸ್ಥಾನ, ಕೌಕ್ರಾಡಿ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಕೌಕ್ರಾಡಿ ಮತ್ತು ಅಶ್ವತ್ಥ ಗೆಳೆಯರ ಬಳಗ ಹೊಸಮಜಲು ಇವರ ಸಹಯೋಗದೊಂದಿಗೆ ಧರ್ಮಶ್ರೀ ಮಕ್ಕಳ ಕುಣಿತ ಭಜನಾ ತರಬೇತಿ ಸಮಾರೋಪ ಹಾಗೂ ಆಹ್ವಾನಿತ ತಂಡಗಳ ವಿಭಿನ್ನ ಕುಣಿತ ಭಜನಾ ಕಾರ್ಯಕ್ರಮವು ಮೇ.23ರಂದು ನೆಲ್ಯಾಡಿ–ಕೌಕ್ರಾಡಿಯ ಶಬರೀಶ ಕಲಾಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕೌಕ್ರಾಡಿ ಗ್ರಾ.ಪಂ ಅಧ್ಯಕ್ಷ ಉದಯಕುಮಾರ್ ಗೌಡ ನೆರವೇರಿಸಿದರು. ಗೌರವಾಧ್ಯಕ್ಷತೆಯನ್ನು ನೆಲ್ಯಾಡಿ -ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಸ್ಥಾನದ ಅಧ್ಯಕ್ಷ ಡಾ.ಸದಾನಂದ ಕುಂದರ್ ವಹಿಸಿ ಶುಭಹಾರೈಸಿದರು. ಸಭಾಧ್ಯಕ್ಷರಾಗಿ ಹೊಸಮಜಲು ಮಕ್ಕಳ ತರಬೇತಿ ಸಮಿತಿಯ ಅಧ್ಯಕ್ಷ ರಮೇಶ್ ಬಾಣಜಾಲು ವಹಿಸಿದ್ದರು.
ಕುಣಿತ ಭಜನಾ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಬಿ.ಸಿ ಟ್ರಸ್ಟ್ ನಿರ್ದೇಶಕ ಬಾಬು ನಾಯ್ಕ್, ಕಡಬ ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಒಗ್ಗು, ಕಡಬ ತಾಲೂಕು ಶ್ರೀ.ಕ್ಷೇ.ಧ. ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ನೆಲ್ಯಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯಾಧ್ಯಕ್ಷ ಕುಶಾಲಪ್ಪ ಗೌಡ ಪಿ.ಎನ್, ಹೊಸಮಜಲು ಅಶ್ವತ್ಥ ಗೆಳೆಯರ ಬಳಗದ ಅಧ್ಯಕ್ಷ ವಂದನ್ ಕುಮಾರ್, ಕುತ್ರಾಡಿ-ಹಾರ್ಪಳ ಶಾಸ್ತಾರೇಶ್ವರ ದೇವಸ್ಥಾನದ ಕಾರ್ಯದರ್ಶಿ ಸುರೇಶ್ ಪಡಿಪಂಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೌಕ್ರಾಡಿ ಒಕ್ಕೂಟ ಅಧ್ಯಕ್ಷ ಬಾಲಕೃಷ್ಣ ಗೌಡ, ಹೊಸಮಜಲು ಧರ್ಮಶ್ರೀ ಮಹಿಳಾ ಕುಣಿತ ಭಜನಾ ಮಂಡಳಿ ಅಧ್ಯಕ್ಷ ಭಾರತಿ ಉಪಸ್ಥಿತರಿದ್ದರು.
ಸನ್ಮಾನ:
ಸುಂದರ ಗೌಡ ಒಗ್ಗು, ತಿರುಮಲೇಶ, ಜನಾರ್ದನ ಗೌಡ ಸೂಡ್ಲು, ಶ್ರೀಧರ್ ಹಾಗೂ ನಿತಿನ್ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯುತು.
ಹೇಮಾ ವಿ ಮತ್ತು ತಂಡದವರು ಪ್ರಾರ್ಥಿಸಿದರು, ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ ಸ್ವಾಗತಿಸಿದರು, ವಸಂತಿ ವರದಿ ವಾಚಿಸಿದರ, ಬಿಳಿನೆಲೆ ಮೇಲ್ವಿಚಾರಕ ರವಿಪ್ರಸಾದ್ ಅಲಾಜೆ ಮತ್ತು ನವ್ಯಪ್ರಸಾದ್ ಅಣ್ಣುಗುಂಡಿ ಕಾರ್ಯಕ್ರಮ ನಿರೂಪಿಸಿದರು. ಕೌಕ್ರಾಡಿ ಒಕ್ಕೂಟದ ಸೇವಾಪ್ರತಿನಿಧಿ ನಮಿತಾ ಎಸ್ ಶೆಟ್ಟಿ ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಆಹ್ವಾನಿತ 21 ಭಜನಾ ತಂಡಗಳಿಂದ ಬಹಳ ವಿಜೃಂಭಣೆ ಯಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಧರ್ಮಶ್ರೀ ಮಹಿಳಾ ಕುಣಿತ ಭಜನಾ ಮಂಡಳಿ ಸದಸ್ಯರು, ಹೊಸಮಜಲು ಅಶ್ವತ್ಥ ಗೆಳೆಯರ ಬಳಗದ ಸದಸ್ಯರು, ಶ್ರೀ ಅಯ್ಯಪ್ಪ ಸ್ವಾಮಿ ದೇವಾಸ್ಥಾನ ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಧರ್ಮಶ್ರೀ ಮಕ್ಕಳಕುಣಿತ ಭಜನಾ ಮಂಡಳಿ ಮತ್ತು ಪೋಷಕರು, ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು, ಕೌಕ್ರಾಡಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.













