ಲಂಚದ ಆಮಿಷ ಆರೋಪ: ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಕ್ರಮ

ಶೇರ್ ಮಾಡಿ

ಮಂಗಳೂರು: ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಲಂಚದ ಆಮಿಷ ಒಡ್ಡಿದ ಆರೋಪದ ಮೇರೆಗೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಿರುದ್ಧ ಲೋಕಾಯುಕ್ತ ಪೊಲೀಸರು ಕ್ರಮಕೈಗೊಂಡಿದ್ದಾರೆ.

ತಾನು ಠಾಣೆಯಲ್ಲಿ ಕರ್ತವ್ಯದಲ್ಲಿರುವಾಗ ಕೋಟೆಕಣಿಯ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್‌ನ ಮಾಲಕ ಪ್ರವೀಣ್ ನಾಯ್ಕ್ ಮತ್ತು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ತನ್ನ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು, ದಾಳಿ ಮಾಡಬಾರದು ಎಂದು ತಿಳಿಸಿದ್ದಲ್ಲದೆ ತಾನು 3 ತಿಂಗಳಿಗೊಮ್ಮೆ 25,000 ರೂ.ವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಆಮಿಷ ಒಡ್ಡಿದ್ದರು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಅದರಂತೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಉಪಾಧೀಕ್ಷಕರಾದ ಡಾ.ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್.ಪಾಲ್ಗೊಂಡಿದ್ದರು.

  •  

Leave a Reply

error: Content is protected !!