ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ತೀವ್ರ ಆಘಾತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಶೇರ್ ಮಾಡಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತ ಘಟನೆಗೆ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ” ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.” ಎಂದು ಪೋಸ್ಟ್‌ ಮಾಡಿದ್ದಾರೆ.

  •  

Leave a Reply

error: Content is protected !!