



ಮಂಗಳೂರು: 2025-26ನೇ ಸಾಲಿಗೆ 1ನೇ ತರಗತಿಯಿಂದ 8ನೇ ತರಗತಿಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ.ನೊಳಗಿರಬೇಕು. ಅರ್ಜಿಯನ್ನು ಸೆಪ್ಟಂಬರ್ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://dom.karnataka.gov.in/ SSP ಪೋರ್ಟಲ್ https://ssp.karnataka.gov.in ಸಹಾಯವಾಣಿ: 8277799990 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.







