ನೆಲ್ಯಾಡಿ ಜೇಸಿಐಯಿಂದ ವೈದ್ಯರ ದಿನಾಚರಣೆ

ಶೇರ್ ಮಾಡಿ

ವಿಟ್ಲ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ ವಿಟ್ಲದಲ್ಲಿ ವಿಶೇಷ ಕಾರ್ಯಕ್ರಮವನ್ನು ಜುಲೈ 1ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 19 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ವೇದಾವತಿ ಎಂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ, 17 ವರ್ಷಗಳಿಂದ ಸೇವೆಯಲ್ಲಿರುವ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ತಜ್ಞ ಡಾ.ಜೀವನ್ ಲಾಸ್ರದೋ ಮತ್ತು 15 ವರ್ಷಗಳ ಸೇವಾ ಅನುಭವದ ಪೆರುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಕೃಷ್ಣಮೂರ್ತಿ ಅವರನ್ನು ಕೂಡ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಎ.ಜೆ.ಆಸ್ಪತ್ರೆಯ ವೈದ್ಯರುಗಳಾದ ಡಾ.ಸುಚಿತ ಎಸ್. ಶೆಟ್ಟಿ, ಡಾ.ನಿಬಿನ್ ನಿಶಾ, ಡಾ.ವಿದ್ಯಾ ಕೃಷ್ಣ, ಡಾ.ಶಫೀಕ್, ಡಾ.ಸ್ಪೂರ್ತಿ ಶೆಟ್ಟಿ, ಡಾ.ಶ್ರೇಷ್ಠ ಆಳ್ವ, ಡಾ.ನಿರಂಜನ್ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  •  

Leave a Reply

error: Content is protected !!