


ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವದ ಅಂಗವಾಗಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ಫಾ.ಸಾಮ್ಯುವೆಲ್ ಜಾರ್ಜ್ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಅವರು ಮಾತನಾಡುತ್ತಾ, “ಇಂದಿನ ವಿದ್ಯಾರ್ಥಿಗಳು ನಾಳೆಯ ಪ್ರಜೆಗಳು. ವಿದ್ಯಾರ್ಥಿ ದಶೆಯಲ್ಲೇ ಪರಿಸರದ ಮಹತ್ವವನ್ನು ಅರಿತು ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿರುವ ಖಾಲಿ ಜಾಗದಲ್ಲಿ ಗಿಡ ನೆಟ್ಟು ಪರಿಸರ ಪ್ರೀತಿ ಪ್ರದರ್ಶಿಸಬೇಕು. ಪ್ರಕೃತಿಯ ರಕ್ಷಣೆ ನಮ್ಮ ಕರ್ತವ್ಯವಾಗಿದೆ. ನಾವೆಲ್ಲಾ ಪರಿಸರವನ್ನು ಗೌರವಿಸಿದಾಗ ಮಾತ್ರ ಅದು ನಮ್ಮನ್ನು ರಕ್ಷಿಸುತ್ತದೆ” ಎಂದು ಹೇಳಿದರು.
ವಿದ್ಯಾರ್ಥಿ ಸಾರ್ಥಕ್ ಪರಿಸರದ ಕುರಿತು ಉಪನ್ಯಾಸ ನೀಡಿದ್ದು, ಪರಿಸರ ಸಂರಕ್ಷಣೆ ಕುರಿತ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಫಾ.ಜೈಸನ್ ಸೈಮನ್, ಉಪ ಪ್ರಾಂಶುಪಾಲ ಜೋಸ್ ಎಂ.ಜೆ., ಮುಖ್ಯ ಶಿಕ್ಷಕ ಜಾರ್ಜ್ ಕೆ. ತೋಮಸ್, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶೆರೀನ್ ಸುನಿಲ್ ಕಾರ್ಯಕ್ರಮ ನಿರೂಪಿಸಿದರು.









