


ಅರಸಿನಮಕ್ಕಿ: ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ವಲಯ ಅರಣ್ಯ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯ ಸಂಯುಕ್ತ ಆಶ್ರಯದಲ್ಲಿ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಯೋಗದೊಂದಿಗೆ ಗಿಡನಾಟಿ ಮತ್ತು ಜಾಗೃತಿ ಕಾರ್ಯಕ್ರಮವು ಅರಸಿನಮಕ್ಕಿಯ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಸದಸ್ಯೆ ಸುಂದರಿ ವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಯಶೋಧರ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, “ಪರಿಸರ ರಕ್ಷಣೆ ಮನೆಯಿಂದಲೇ ಪ್ರಾರಂಭವಾಗಬೇಕು” ಎಂಬ ಸಂದೇಶ ನೀಡಿದರು.
ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಮಂಜುಳಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ವಲಯ ಮೇಲ್ವಿಚಾರಕಿ ಶಶಿಕಲಾ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯೆ ಮಂಜುಳಾ ಕಾರಂತ್ ಹಾಗೂ ಅರಸಿನಮಕ್ಕಿ ಶೌರ್ಯ ಘಟಕದ ಅವಿನಾಶ್ ಭಿಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಕನಿಷ್ಠಿ ಮಾನಸ ಮತ್ತು ತಂಡ ಪ್ರಾರ್ಥನೆಗೈದರು, ಶಿಕ್ಷಕಿ ದಿವ್ಯಾ ವಿಜೇತರ ಪಟ್ಟಿಯನ್ನು ವಾಚಿಸಿದರು. ದೈಹಿಕ ಶಿಕ್ಷಕಿ ಮೀನಾಕ್ಷಿ ಸ್ವಾಗತಿಸಿದರು. ಶಿಕ್ಷಕಿ ಚೇತನಾ ಕಾರ್ಯಕ್ರಮ ನಿರೂಪಿಸಿದರು, ರಾಮ್ ಕುಮಾರ್ ವಂದಿಸಿದರು
ಬಳಿಕ ಶೌರ್ಯ ತಂಡ ಹಾಗೂ ಗ್ರಾಮಸ್ಥರ ಸಹಕಾರದಿಂದ ಶಾಲಾ ಆವರಣದಲ್ಲಿ ಗಿಡ ನೆಡಲಾಗಿತು. ಈ ಸಂದರ್ಭದಲ್ಲಿ ಶಿಕ್ಷಕಿ ಚೇತನಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪಾ, ಸ್ವಚ್ಛತಾ ಸೇನಾನಿ ಸರೋಜಿನಿ, ಮುಂಡಾಜೆ ಸಚಿನ್ ಭಿಡೆ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಯೋಜನೆಯ ಒಕ್ಕೂಟದ ಸದಸ್ಯರು ಶ್ರಮದಾನ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









