


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ವಿವಿಧ ಸಂಘಗಳ ಉದ್ಘಾಟನೆ ಜರುಗಿತು.
ಎಸ್.ಡಿ.ಎಂ ಎಜುಕೇಶನಲ್ ಸೊಸೈಟಿಯ ಶಿಕ್ಷಣ ಸಂಯೋಜಕರಾದ ಎಸ್.ಎನ್. ಕಾಕತ್ಕರ್ ಉದ್ಘಾಟನೆ ನೆರವೇರಿಸಿದರು. ಅವರು ಮಾತನಾಡುತ್ತಾ, “ಕ್ಲಾಸಿನಲ್ಲಿ ಪಾಠ ಪಾಠ್ಯಕ್ರಮ ಮಾತ್ರವಲ್ಲ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಬೆಳಗಿಸಿಕೊಳ್ಳಲು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗುವುದು ಅವಶ್ಯಕ,” ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಂದ ನೃತ್ಯ, ಕಿರು ಯಕ್ಷಗಾನ ಪ್ರದರ್ಶನ, ವಿಶೇಷವಾಗಿ ಕ್ರೀಡಾ ಕ್ಷೇತ್ರದ ವಿದ್ಯಾರ್ಥಿಗಳಿಗಾಗಿ ಹೊಸ ಅಂಕಣದ ಉದ್ಘಾಟನೆಯು ವಿಶೇಷ ಗಮನ ಸೆಳೆಯಿತು.
ಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ತರಬೇತುದಾರ ಲಕ್ಷ್ಮಣಗೌಡ, ನೃತ್ಯ ಶಿಕ್ಷಕಿ ಚೈತ್ರ ಹಾಗೂ ಇತರ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕರಾದ ಕೂಸಪ್ಪಗೌಡ ಸ್ವಾಗತಿಸಿದರು, ಸುಜಾತ ವಂದಿಸಿದರು ಹಾಗೂ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.









