

ಬೆಳ್ತಂಗಡಿ: ಹೃದಯಾಘಾತದಿಂದ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಹಾಸನ ಜಿಲ್ಲೆಯ ನಿವಾಸಿ ಸತೀಶ್(46) ಜುಲೈ 15ರಂದು ಬೆಳಗ್ಗೆ ಸ್ನಾನ ಮಾಡಿ ವಾಪಸ್ ಬರುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಬಾಡಿಗೆ ಮನೆಯಲ್ಲಿ ನಡೆದಿದೆ.
ಬೆಳಗ್ಗೆ ಸ್ನಾನ ಮುಗಿಸಿ ವಾಪಸ್ ಬರುವಾಗ ಕುಸಿದು ಬಿದ್ದ ಸತೀಶ್ ಅವರನ್ನು ಪತ್ನಿ ಆಸ್ಪತ್ರೆಗೆ ಕರೆದುಕೊಂಡು ಬಂದು ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.
ಸತೀಶ್ ಮೂಲತಃ ಹಾಸನ ಜಿಲ್ಲೆಯವರು ಲಾಯಿಲದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತ್ನಿ ಜಯಶ್ರೀ, ಮಗ ಚಂದನ್ ಅವರನ್ನು ಅಗಲಿದ್ದಾರೆ.










