

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಸೋಮವಾರದಂದು ಕಾರು ಹಾಗೂ ಟ್ರೈಲರ್ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಬೆಂಗಳೂರು ಮೂಲಕ ಉಡುಪಿಗೆ ತೆರಳುತ್ತಿದ್ದ ಕಾರು ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ರೈಲರ್ ಲಾರಿ ನಡುವೆ ಮುಖಾಮುಖಿ ತೀವ್ರ ಧಕ್ಕೆಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಅನಾಹುತ ಸಂಭವಿಸದೆ ಪಾರಾಗಿದ್ದಾರೆ.
ಕಾರಿನಲ್ಲಿ ಉಡುಪಿ ಮೂಲದ ರಾಜೇಶ್ ರಾವ್, ಪುರುಷೋತ್ತಮ, ಪೂಜಾ ರಾವ್, ಸಂಜನಾ ರಾವ್ ಮತ್ತು ಭವಿಷ್ ರಾವ್ ಎಂಬವರು ಪ್ರಯಾಣಿಸುತ್ತಿದ್ದರು. ಲಾರಿ ಚಾಲಕನನ್ನು ಬಾಗಲಕೋಟೆ ಮೂಲದ ಹನುಮಂತ ಎಂದು ಗುರುತಿಸಲಾಗಿದೆ.
ಘಟನೆಯ ಸುದ್ದಿ ತಿಳಿದೊಡನೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.










