

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಉಜಿರೆಯಲ್ಲಿ ಆ. 2 ರಂದು ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ರವೀಶ್ ಪಡುಮಲೆ ಅವರು ದೀಪ ಬೆಳಗಿಸಿ ಚೆನ್ನಮಣೆ ಆಟ ಆಡುವ ಮೂಲಕ ನೆರವೇರಿಸಿದರು. ಅವರು ಮಕ್ಕಳಿಗೆ ತುಳುನಾಡಿನ ಪರಂಪರೆ, ಹಬ್ಬಗಳ ಮಹತ್ವ ಹಾಗೂ ಹಳೆಯ ಜೀವನ ಶೈಲಿಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್, ಉಪಾಧ್ಯಕ್ಷರಾದ ಪ್ರತಿಮ, ಕೃಷ್ಣ ಪ್ರಸಾದ್ ಹಾಗೂ ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯೆ ಶೀಲಾ ಉಪಸ್ಥಿತರಿದ್ದರು.
ಶಿಕ್ಷಕ ರಕ್ಷಕ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು, ಸಮತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.










