

ನೆಲ್ಯಾಡಿ: ಆಲಂತಾಯ ಗ್ರಾಮದ ಪೆರ್ಲ ನಿವಾಸಿ, ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ವೆಂಕಪ್ಪ ಗೌಡ ಪೆರ್ಲ(75ವ.)ರವರು ಅಲ್ಪಕಾಲದ ಅಸೌಖ್ಯದಿಂದ ಆ.4ರಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವೆಂಕಪ್ಪ ಗೌಡರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಟ್ರಸ್ಟಿಯಾಗಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾಗಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರು ನೆಲ್ಯಾಡಿ ಮಂಡಲ ಪಂಚಾಯತ್ ಸದಸ್ಯರಾಗಿ, ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯರಾಗಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ಒಕ್ಕಲಿಗ ಗೌಡ ಸೇವಾ ಸಂಘದ ಮುಂದಾಳಾಗಿದ್ದು ಬಿಜೆಪಿಯ ಹಿರಿಯ ಮುಖಂಡರಾಗಿದ್ದಾರೆ. ವೆಂಕಪ್ಪ ಗೌಡ ಅವರು ಗೋಳಿತ್ತೊಟ್ಟು ಗ್ರಾಮದ ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆ ಸ್ಥಾಪನೆಗೆ ಕಾರಣಕರ್ತರೂ ಆಗಿದ್ದಾರೆ.
ಮೃತರು ಪತ್ನಿ ದೇಜಮ್ಮ, ಪುತ್ರಿ ಸರೋಜ, ಸೊಸೆ ಗೀತಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.










