ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಲಾಂ ಬಿಲಾಲ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕರ ತ್ಯಾಗ, ತಪಸ್ಸು ಮತ್ತು ಶ್ರಮ ಹೂಡಿದೆ. ಇಂದಿನ ಪೀಳಿಗೆಯವರು ಆ ತ್ಯಾಗವನ್ನು ನೆನೆದು, ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು. ಗ್ರಾಮಾಭಿವೃದ್ಧಿ, ಸ್ವಚ್ಛತೆ ಮತ್ತು ಏಕತೆ ನಮ್ಮ ಪ್ರಮುಖ ಗುರಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರು, ಕಾರ್ಯದರ್ಶಿ ಭಾರತಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಅಂಗು, ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು.

  •  

Leave a Reply

error: Content is protected !!