

ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ-ಕೌಕ್ರಾಡಿ ಇವರ ಆಶ್ರಯದಲ್ಲಿ ಭಾನುವಾರ ಆಟಿದ ಲೇಸ್ ಕಾರ್ಯಕ್ರಮವು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನೆರವೇರಿತು.
ಸಂಘದ ಅಧ್ಯಕ್ಷ ಶೀನಪ್ಪ ನಾಯ್ಕ ಬರೆಗುಡ್ಡೆ ಅಧ್ಯಕ್ಷತೆ ವಹಿಸಿ “ಸಂಘಟಿತರಾಗಿ ಪರಸ್ಪರ ಸಹಕಾರ ನೀಡಿದರೆ ಯಾವುದೇ ಸಮಸ್ಯೆಗಳನ್ನು ಬಗೆಹರಿಸಬಹುದು” ಎಂಬ ಸಂದೇಶ ನೀಡಿ ಎಲ್ಲರನ್ನು ಸ್ವಾಗತಿಸಿದರು.
ಕೆ.ಎಸ್.ಆರ್.ಟಿ.ಸಿ. ನಿವೃತ್ತ ನೌಕರ ಅಣ್ಣು ನಾಯ್ಕ ಪೆಲತ್ತಿಲ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ “ಸಂಘದಲ್ಲಿ ತೊಡಗಿಕೊಳ್ಳುವ ಅಗತ್ಯ, ಆಟಿ ತಿಂಗಳ ವೈಶಿಷ್ಟ್ಯತೆ ಹಾಗೂ ಸಮಾಜ ಬಾಂಧವ್ಯದ ಮಹತ್ವ” ಕುರಿತು ಮಾತನಾಡಿ ಶುಭಾಶಯಗಳನ್ನು ತಿಳಿಸಿದರು.
ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಮನರಂಜನಾ ಆಟಗಳನ್ನು ಸಂಘದ ಸದಸ್ಯ ದಿನೇಶ್ ನಾಯ್ಕ ಪಡುಬೆಟ್ಟು ನಡೆಸಿಕೊಟ್ಟರು. ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ನಾರಾಯಣ ನಾಯ್ಕ ಚಾಮೆತ್ತಮೂಲೆ ಉಪಸ್ಥಿತರಿದ್ದರು.
ಆಟಿ ವಿಶೇಷ ಖಾದ್ಯಗಳೊಂದಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಅನನ್ಯ ಹಾಗೂ ತಂಡ ಪ್ರಾರ್ಥನೆ ಸಲ್ಲಿಸಿದರು. ವಿದ್ಯಾಲತಾ ಚಾಮೆತ್ತಮೂಲೆ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಕೋಶಾಧಿಕಾರಿ ವಿಶ್ವನಾಥ ನಾಯ್ಕ ವಂದಿಸಿದರು











