ಗೋಳಿತ್ತೊಟ್ಟು: ಬೈಕ್, ಟಾಟಾ ಇಂಟ್ರಾ ವಿ-30ಡಿಕ್ಕಿ-ಬೈಕ್ ಸವಾರನಿಗೆ ಗಾಯ

ಶೇರ್ ಮಾಡಿ

ನೆಲ್ಯಾಡಿ: ಬೈಕ್ ಹಾಗೂ ಟಾಟಾ ಇಂಟ್ರಾ ವಿ-30 ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಆ.25ರಂದು ಮಧ್ಯಾಹ್ನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ನಡೆದಿದೆ.

ಗೋಳಿತ್ತೊಟ್ಟು ಕಾಂಚನಕ್ರಾಸ್‌ನಲ್ಲಿ ವಾಸವಾಗಿದ್ದು, ಕೆಎನ್‌ಆರ್ ಕನ್‌ಸ್ಟ್ರಕ್ಷನ್‌ಗೆ ಸೇರಿದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ರಂಗಸ್ವಾಮಿ(34ವ.) ಗಾಯಗೊಂಡವರು. ರಂಗಸ್ವಾಮಿ ಅವರು ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಹಾಗೂ ಅವರ ಹಿಂಬದಿಯಿಂದ ಅಂದರೆ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ದಿಲೀಪು ವಿ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಟಾಟಾ ಇಂಟ್ರಾ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ರಂಗಸ್ವಾಮಿ ಅವರ ಎಡಕಾಲು ಹಾಗೂ ಬೆನ್ನಿಗೆ ಗಾಯವಾಗಿದೆ.

ಗಾಯಾಳು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ರಂಗಸ್ವಾಮಿ ನೀಡಿದ ದೂರಿನಂತೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  •  

Leave a Reply

error: Content is protected !!