
ನೆಲ್ಯಾಡಿ : ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸರಕಾರಿ ಪದವಿಪೂರ್ವ ಕಾಲೇಜು ಸವಣೂರಿನಲ್ಲಿ ಅದ್ದೂರಿಯಾಗಿ ನಡೆಯಿತು. ಈ ಕ್ರೀಡಾಕೂಟದಲ್ಲಿ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಸಂಸ್ಥೆಯ ಹೆಮ್ಮೆ ಹೆಚ್ಚಿಸಿದರು.
ಕಾಲೇಜು ವಿಭಾಗದ ವಿದ್ಯಾರ್ಥಿ ಅಫ್ಲಾಲ್ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಹಾಗೂ ಹರ್ಷ ಜಾವಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಬಾಲಕಿಯರ ತ್ರೋಬಾಲ್ ಮತ್ತು ವಾಲಿಬಾಲ್ ತಂಡಗಳು ದ್ವಿತೀಯ ಸ್ಥಾನವನ್ನು ಗಳಿಸಿವೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಮಹಮ್ಮದ್ ಹಾರೀಸ್ ತರಬೇತಿ ನೀಡಿದ್ದು, ಇವರ ಸಾಧನೆಗೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಫಾ. ಅನೀಶ್ ಪಾರಶೇರಿಲ್, ಸಂಚಾಲಕ ಫಾ.ನೋಮಿಸ್ ಕುರಿಯಾಕೋಸ್, ಪ್ರಾಂಶುಪಾಲ ಎಂ.ಕೆ. ಏಲಿಯಾಸ್, ಪ್ರೌಢಶಾಲಾ ಮುಖ್ಯಸ್ಥರು ಎಂ.ಐ. ತೋಮಸ್ ಹಾಗೂ ಹರಿಪ್ರಸಾದ್ ಕೆ., ಉಪನ್ಯಾಸಕ-ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.










