ಬೆಥನಿ ಐಟಿಐಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಶೇರ್ ಮಾಡಿ

ನೆಲ್ಯಾಡಿ: “ರಾಷ್ಟ್ರೀಯತೆಗೆ ಕ್ರೀಡೆ ಮೂಲಕ ಚಿಂತನೆ” ಎಂಬ ಸಂದೇಶದೊಂದಿಗೆ ಮೇಜರ್ ಧ್ಯಾನ್ ಚಂದ್ ಅವರ ನೆನಪಿನಾರ್ಥ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಸಂಸ್ಥೆಯ ಕ್ರೀಡಾ ವಿಭಾಗದ ಸಂತೋಷ್ ಪಿಂಟೋ ಮತ್ತು ವಿನ್ಸೆಂಟ್ ಸಿ.ಎಸ್. ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಸುಮಾರು ಎರಡು ಕಿಲೋಮೀಟರ್ ದೂರದ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಯಿತು.

ಈ ಓಟದಲ್ಲಿ ಶ್ರೀಜನ ಪ್ರಥಮ, ಲಾವಣೀಶಾ ದ್ವಿತೀಯ, ಸ್ವಾಸ್ತಿಕ್ ಕೆ.ಎಸ್. ತೃತೀಯ, ಸುದರ್ಶನ ಎ.ಆರ್. ಚತುರ್ಥ ಸ್ಥಾನ ಪಡೆದುಕೊಂಡರು. ವಿಜೇತರಿಗೆ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ವತಿಯಿಂದ ಬಹುಮಾನಗಳು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ಸಜಿ ಕೆ. ತೋಮಸ್, ಸೀನಿಯರ್ ಚೇಂಬರ್ ನೆಲ್ಯಾಡಿ ಲೀಜಿಯನ್ ಅಧ್ಯಕ್ಷ ಪಿಪಿಎಫ್ ಪ್ರಕಾಶ್ ಕೆ.ವೈ, ತರಬೇತಿ ಅಧಿಕಾರಿ ಜೋನ್ ಪಿ.ಎಸ್., ಕಿರಿಯ ತರಬೇತಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

  •  

Leave a Reply

error: Content is protected !!