

ವಿಟ್ಲ ತಾಲೂಕಿನ ಕೊಳ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ಮಹಿಳೆ ಮೇಲೆ ಕತ್ತಿ ಹಿಡಿದು ಹಲ್ಲೆಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಮಗನನ್ನು ಶಾಲೆಯಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದ ಮಹಿಳೆಯೊಂದಿಗೆ ಆರೋಪಿ ಅನುಚಿತವಾಗಿ ವರ್ತಿಸಿ, ಬಳಿಕ ಕತ್ತಿ ಹಿಡಿದು ದಾಳಿ ಮಾಡಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಹಾಗೂ ಮಹಿಳೆಯ ತಾಯಿ ಸ್ಥಳಕ್ಕೆ ಧಾವಿಸಿದರು. ತಕ್ಷಣದ ಆತಂಕದಲ್ಲಿ ಆರೋಪಿ ಓಡಿ ಹೋದರು, ಮಹಿಳೆಯ ಬೆರಳುಗಳಿಗೆ ಗಾಯಗಳಾಗಿದ್ದು, ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬಂಧಿತ ಆರೋಪಿ ಆಶ್ರಫ್ (33), ಸ್ಥಳೀಯ ನಿವಾಸಿ ಎನ್ನಲಾಗಿದ್ದು, ಮಹಿಳೆಯ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.






