ಕಡಬ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಾಲಕಿಯರ ಅದ್ಬುತ ಸಾಧನೆ – ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಕಡಬ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟವು ಸೆ. 6ರಂದು ಅಲಂಕಾರು ದುರ್ಗಾಂಬ ಪದವಿಪೂರ್ವ ಕಾಲೇಜು ನಲ್ಲಿ ಜರಗಿತು.

ಪಂದ್ಯಾಟದಲ್ಲಿ ಶ್ರೇಷ್ಠ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡವು ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು, ರಾಮಕುಂಜ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ತಂಡದ ಆಟಗಾರ್ತಿಯರಲ್ಲಿ ಕವನಶ್ರೀ “ಉತ್ತಮ ಹಿಡಿತಗಾರ್ತಿ” ಪ್ರಶಸ್ತಿಯನ್ನು ಹಾಗೂ ರಶ್ಮಿತಾ “ಸರ್ವಾಂಗೀಣ ಆಟಗಾರ್ತಿ” ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ತಂಡಕ್ಕೆ ದೈಹಿಕ ಶಿಕ್ಷಣ ನಿರ್ದೇಶಕರಾದ ಮಹಮ್ಮದ್ ಹಾರಿಸ್ ಅವರು ಮಾರ್ಗದರ್ಶನ ಮತ್ತು ತರಬೇತಿ ನೀಡಿದರು.

ಈ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿಗಳಾದ ರೆ. ಫಾ. ಅನೀಶ್ ಪಾರಶೇರಿಲ್, ಸಂಚಾಲಕರಾದ ರೆ. ಫಾ. ನೋಮಿಸ್ ಕುರಿಯಾಕೋಸ್, ಪ್ರಾಚಾರ್ಯರಾದ ಎಂ.ಕೆ. ಏಲಿಯಾಸ್, ಪ್ರೌಢಶಾಲಾ ಮುಖ್ಯಸ್ಥರಾದ ಎಂ.ಐ. ತೋಮಸ್, ಹರಿಪ್ರಸಾದ್ ಕೆ. ಹಾಗೂ ಉಪನ್ಯಾಸಕರು, ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭ ಹಾರೈಸಿದರು .

  •  

Leave a Reply

error: Content is protected !!