

ನೆಲ್ಯಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ಸೋಮವಾರ ದಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಿಲ್ಲೆಯ ವಿವಿಧ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಪ್ರದರ್ಶಿಸಿ ಈ ಕ್ರೀಡಾ ಕೂಟದಲ್ಲಿ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುದೀಪ್ ತಮ್ಮ ಶ್ರೇಷ್ಠ ಪ್ರದರ್ಶನದ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸುದೀಪ್ ಅವರು ದಿನೇಶ್ ಹಾಗೂ ಸುಜಾತಾ ದಂಪತಿಗಳ ಸುಪುತ್ರರಾಗಿದ್ದು, ಸಂತ ಜಾರ್ಜ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಮಹಮ್ಮದ್ ಹಾರಿಸ್ ಅವರ ಶಿಸ್ತುಬದ್ಧ ತರಬೇತಿ ಫಲವಾಗಿ ಈ ಯಶಸ್ಸನ್ನು ದಾಖಲಿಸಿದ್ದಾರೆ.
ಸಂತ ಜಾರ್ಜ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಸಮೂಹ ಈ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದೆ. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಫಾ.ಅನೀಶ್ ಪಾರಶೇರಿಲ್, ಸಂಚಾಲಕ ಫಾ.ನೋಮಿಸ್ ಕುರಿಯಾಕೋಸ್, ಪ್ರಾಚಾರ್ಯ ಎಂ.ಕೆ. ಏಲಿಯಾಸ್, ಪ್ರೌಢಶಾಲಾ ಮುಖ್ಯಶಿಕ್ಷಕ ಎಂ.ಐ. ತೋಮಸ್, ಹರಿಪ್ರಸಾದ್ ಕೆ ಹಾಗೂ ಉಪನ್ಯಾಸಕರು, ಶಿಕ್ಷಕ-ಶಿಕ್ಷಕೇತರ ವೃಂದದವರು ಸುದೀಪ್ ಅವರಿಗೆ ಹಾರೈಸಿದರು.






